ಕೊಪ್ಪಳ: ಟ್ರ್ಯಾಕ್ಟರ್ ಗೆ ಡೀಸೆಲ್ ತುಂಬಿದ ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ಲ-ಬನ್ನಿಕೊಪ್ಪ ಗ್ರಾಮಗಳ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ತಾಲೂಕಿನ ಬನ್ನಿಕೊಪ್ಪ ಗ್ರಾಮದ ನಿವಾಸಿಗಳಾದ ಚನ್ನಪ್ಪ ಈರಪ್ಪ ಹಡಪದ(32), ಈರಮ್ಮ ಹಡಪದ(50), ಮೌಲಾಭಿ(55) ಹಾಗೂ ಮೊಹಮ್ಮದ್ ರಾಜಾಸಾಬ್ ಕವಲೂರು(20) ಎಂದು ಗುರುತಿಸಲಾಗಿದೆ.
ಈರಪ್ಪ ಸೇರಿ ಸುಮಾರು 7ಮಂದಿ ಕೂಲಿ ಕಾರ್ಮಿಕರು ಇಲ್ಲಿನ ಕುಕನೂರಿನಿಂದ ಕೊಪ್ಪಳಕ್ಕೆ ಟ್ರ್ಯಾಕ್ಟರ್ ನಲ್ಲಿ ಹೋಗುತ್ತಿದ್ದ ವೇಳೆ ಡಿಸೇಲ್ ತುಂಬಿದ್ದ ಟ್ಯಾಂಕರ್ ಹಿಂಬದಿಯಿಂದ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಈ ಅವಘಡದಲ್ಲಿ ಗಾಯಗೊಂಡ ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕುಕನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

