ವಿಜಯಪುರ: ಕಾಮುಕನೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ದಾರುಣ ಘಟನೆ ತಾಲೂಕಿನ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಅಶೋಕ ಭಾವಿಕಟ್ಟಿ(42) ಎಂದು ಗುರುತಿಸಲಾಗಿದೆ.
ಶುಕ್ರವಾರ 11ರ ಬಾಲಕಿಯೋರ್ವಳು ತನ್ನ ಮನೆ ಮುಂದೆ ಆಡವಾಡುತ್ತಿದ್ದು, ಈ ವೇಳೆ ಆರೋಪಿ ಅಶೋಕ ಬಾಲಕಿಯನ್ನು ಗ್ರಾಮದ ಹೊರವಲಯದ ಜಮೀನಿಗೆ ಹೊತ್ತೊಯ್ದಿದ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಬಳಿಕ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಗುರುತಿಸಿಕೊಂಡಿದ್ದ ಎಂದು ತಿಳಿದು ಬಂದಿದ್ದು, ಈ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ಮುಖಂಡರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪೋಷಕರು ದೂರಿದ್ದಾರೆ.
ಈ ಬಗ್ಗೆ ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

