ಕಾಸರಗೋಡು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಶುಕ್ರವಾರ ತಡ ರಾತ್ರಿ ಚಲಿಯಾಂಗೋಡುನಲ್ಲಿ ನಡೆದಿದೆ.
ಮುಸ್ಲಿಂ ಲೀಗ್ ಮುಖಂಡ ಕೀಯೂರಿನ ಪಿ .ಬಿ ಅಶ್ರಫ್ ( 45) ಮೃತರು ಎಂದು ಗುರುತಿಸಲಾಗಿದೆ. ಗಾಯಗೊಂಡ ಅನ್ವರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಶ್ರಫ್ ಹಾಗೂ ಅನ್ವರ್ ಅವರು ಬೈಕ್ ನಿಂದ ಮೇಲ್ಪರಂಬ ಕಡೆಯಿಂದ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಗಂಭಿರ ಗಾಯಗೊಂಡಿದ್ದರು. ಬಳಿಕ ಅವರನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಶ್ರಫ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಾಸರಗೋಡು ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.

