ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಗ್ಯಾಲಕ್ಷಿ ಕಾಂಪ್ಲೆಕ್ಸ್ನಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಜಿಲ್ಲಾ ಅಪರಾಧ ಪತ್ತೆ ದಳ ಎಸೈ ಸುನಿಲ್ ವೈ. ನಾಯ್ಕ್ ನೇತೃತ್ವದ ಪೊಲೀಸರು ಭಾನುವಾರ ಸಂಜೆ ದಿಢೀರ್ ದಾಳಿ ನಡೆಸಿ ರೂ.1.47ಲಕ್ಷ ಮೊತ್ತದ ನಗದು ವಶಪಡಿಸಿಕೊಂಡ ಘಟನೆ ನಡೆದಿದೆ.

ಇದೇ ವೇಳೆ ಜುಗಾರಿ ಆಟದಲ್ಲಿ ನಿರತರಾಗಿದ್ದರು ಎನ್ನಲಾದ ಒಟ್ಟು 43 ಮಂದಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *