ಭೋಪಾಲ್: ಶಿವರಾತ್ರಿ ಪ್ರಸಾದ ಸೇವಿಸಿ ಸಾವಿರಾರು ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಬರ್ವಾನಿಯ ಆಶ್ರಮದಲ್ಲಿ ಘಟನೆ ನಡೆದಿದ್ದು, ಭಕ್ತರಿಗೆ ಪ್ರಸಾದದ ರೂಪದಲ್ಲಿ ಕಿಚಡಿ ನೀಡಲಾಗಿತ್ತು. ಇದನ್ನು ಸೇವಿಸಿದ ಜನರಿಗೆ ಹೊಟ್ಟೆ ನೋವು ಮತ್ತು ವಾಂತಿ ಶುರುವಾಗಿದೆ. ಈ ವೇಳೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

