ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಇಲ್ಲಿನ ಮಾಣಿ ಸಮೀಪದ ಹಳೀರ್ ಗುರುವಾರ ನಡೆದಿದೆ.
ಮಾಣಿಯಿಂದ ಮಂಗಳೂರಿನ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ರಸ್ತೆಗೆ ಪಲ್ಟಿಯಾಗಿ ಬೈಕ್ ಗೆ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

