ಮಂಡ್ಯ: ರೈತ ಮುಖಂಡ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಬ್ಬಡಿ ಪಂದ್ಯವಾಳಿಯನ್ನು ನೋಡಿಕೊಂಡು ಅವರು ಪಾಂಡವಪುರಕ್ಕೆ ವಾಪಸ್ಸು ಬರುತ್ತಿದ್ದ ವೇಳೆಯಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಕೂಡಲೇ ಅವರನ್ನು ಹೆಚ್ಚಿನ ಚಿಕತ್ಸೆಗಾಗಿ ಮಂಡ್ಯದ ಮಿಮ್ಸ್ ಕರೆ ತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತದೇಹವನ್ನು ಕೆ.ಎಸ್ ಪುಟ್ಟಣ್ಣಯ್ಯ ಅವರ ಹುಟ್ಟೂರಾದ ಕ್ಯಾತನಹಳ್ಳಿಯಲ್ಲಿರುವ ಕೆ.ಎಸ್ ಪುಟ್ಟಣ್ಣಯ್ಯ ಅವರ ತೋಟದ ಮನೆಯಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಸಲಾಗುವುದು ಅಂತ ತಿಳಿದು ಬಂದಿದ್ದು, ಅದಕ್ಕೂ ಮುನ್ನ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತ ದೇಹವನ್ನು ಇಡಲು ನಿರ್ಧಾರಮಾಡಲಾಗಿದ್ದು, ಈ ಬಗ್ಗೆ ಈಗಾಗಾಲೇ ಎಲ್ಲಾ ವ್ಯವಸ್ಥೆಗಳು ಜಿಲ್ಲಾಡಳಿತದಿಂದ ನಡೆಸಲಾಗುತ್ತಿದೆ ಅಂತ ತಿಳಿದು ಬಂದಿದೆ.
ಕೆ.ಎಸ್ ಪುಟ್ಟಣ್ಣಯ್ಯ ಪರಿಚಯ:
ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಕಸಬಾ ಹೋಬಳಿ ಕ್ಯಾತನಹಳ್ಳಿ ಗ್ರಾಮದ ಕೆ.ಎಸ್. ಶ್ರೀಕಂಠೇಗೌಡ ಹಾಗೂ ಕೆ.ಎಸ್. ಶಾರದಮ್ಮ ದಂಪತಿಯ ಜೇಷ್ಠಪುತ್ರರಾಗಿ ದಿನಾಂಕ 23.12.1949ರಲ್ಲಿ ಜನಿಸಿದ ಕೆ.ಎಸ್. ಪುಟ್ಟಣ್ಣಯ್ಯ ಕರ್ನಾಟಕ ರೈತ ಸಂಘ ಕಂಡಂತಹ ಏಕೈಕ ಧೀಮಂತ ಹೋರಾಟಗಾರ.
ವಿದ್ಯಾಭ್ಯಾಸ : ಇವರು ತಮ್ಮ ಹುಟ್ಟೂರಿನಲ್ಲಿಯೇ ಎಸ್.ಎಸ್.ಎಲ್.ಸಿ.ಯನ್ನು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮುಗಿಸಿ ಮೈಸೂರಿನಲ್ಲಿರುವ ಪ್ರತಿಷ್ಠಿತ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಮಾಡಿ ನಂತರ ಇದೇ ಮೈಸೂರಿನ ಡಿ.
ಬನುಮಯ್ಯ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದಿರುತ್ತಾರೆ.
ಈ ರೀತಿ ವಿದ್ಯಾರ್ಥಿಯಾಗಿದ್ದಾಗಲೇ ಹಳ್ಳಿಗಾಡುಗಳಲ್ಲಿ ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರು ಹಾಗೂ ಬಡ ಮಹಿಳೆಯರುಗಳು ಅನುಭವಿಸುತ್ತಿದ್ದ ಯಾತನಮಯ ಜೀವನಗಳನ್ನು ಕಣ್ಣಾರೆ ಕಂಡಿದ್ದ ಈ ಪದವೀದರ ಕೆ.ಎಸ್. ಪುಟ್ಟಣ್ಣಯ್ಯ ಅವರು ತಮ್ಮ ಮುಂದಿನ ವ್ಯಾಸಂಗಕ್ಕೆ ಹಾಗೂ ಸರ್ಕಾರಿ ನೌಕರಿಗೆ ಎಡತಾಕದೆ ಧೀನದಲಿತರುಗಳ ಏಳಿಗೆಗಾಗಿ ದುಡಿಯಬೇಕೆಂಬ ಅಚಲ ವಿಶ್ವಾಸದಿಂದ ಮಂಡ್ಯ ಜಿಲ್ಲೆಯಲ್ಲಿ ಈ ರೀತಿ ಕಷ್ಟ ಜೀವಿಗಳಿಗೆ ಸ್ಪಂಧಿಸುತ್ತಿದ್ದರು.ರಾಜಕೀಯ ಪ್ರವೇಶ
ಎಸ್.ಡಿ. ಜಯರಾಂ ರವರ ಮಾರ್ಗದರ್ಶನದಲ್ಲಿ ಆಗಸ್ಟ್ 1983ರಲ್ಲಿ ಕರ್ನಾಟಕ ರಾಜ್ಯರೈತ ಸಂಘದ ಸಾಮಾನ್ಯ ಕಾರ್ಯಕರ್ತನಾಗಿ ಪಾದಾರ್ಪಣೆಮಾಡಿ ತಮ್ಮ ಬಾಲ್ಯದಿಂದಲೂ ಬೇರೂರಿದ್ದ ಕೃಕರು, ಕೂಲಿಕಾರ್ಮಿಕರು, ಮಹಿಳೆಯರ ಶೋಷಣೆ ಇನ್ನಿತರ ಬಡ ಜನಾಂಗದವರುಗಳ ಏಳಿಗೆಗೆ ಶ್ರಮಿಸಬೇಕೆಂಬ ಮಹಾದಾಸೆುಂದ ಎಲ್ಲಾ ವರ್ಗದವರ ಪ್ರೀತಿ ಪಾತ್ರರಾಗಿ ಸಾಮಾನ್ಯ ಕಾರ್ಯಕರ್ತರಿಂದ ಪಾಂಡವಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ, ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷರಾಗಿ ಹಾಗೂ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಗಳಾಗಿ ಜನಪರ ಕಾರ್ಯಗಳನ್ನು ನೆರವೇರಿಸಿಕೊಂಡು ಬಂದು ಸಫಲತೆಯನು ಕಣ್ಣಾರೆ ಕಂಡಂತಹ ಸುಧಿನಗಳಲ್ಲಿ ಇವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಞರಾಗಿ 1999 ರಿಂದ 2012ರ ವರೆಗೆ ಸಮರ್ಥವಾಗಿ ಜವಾಬ್ದಾರಿಯನ್ನು ನಿಬಾಯಿಸಿಕೊಂಡು ಬಂದು ಸರ್ವವರ್ಗದವರನ್ನು ಒಗ್ಗೂಡಿಸಿ ಸಂಘವನ್ನು ಮುನ್ನೆಡಿಸಿಕೊಂಡು ಬಂದು ಸರ್ವರಿಗೂ ಸೇವಾ ಸೌಲಭ್ಯಗಳ ಒದಗಿಸಿಕೊಂಡು ಬಂದಂತಹ ಕೀರ್ತಿ ಈ ಕೆ.ಎಸ್.
ಪುಟ್ಟಣ್ಣಯ್ಯನವರಿಗೆ ಸಲ್ಲಿರುತ್ತವೆ. ನಂತರ ಕರ್ನಾಟಕರಾಜ್ಯ ರೈತ ಸಂಘದ ಬೆಂಬಲಿನ ರಾಜಕೀಯ ಪಕ್ಷವಾದ, ‘ಸರ್ವೋದಯ ಕರ್ನಾಟಕ ಪಕ್ಷ’ದ ಕಾರ್ಯಾಧ್ಯಕ್ಷರಾಗಿ ಈವರೆವಿಗೂ ಸೇವೆಸಲ್ಲಿಸುತ್ತಿರುತ್ತಾರೆ.

