1518934967-mohammed_haris_nalapad-300x225

ಬೆಂಗಳೂರು:  ವಿದ್ವತ್ ಮೇಲೆ ನಡೆಸಿದ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಸೋಮವಾರ ಕಬ್ಬನ್ ಪಾರ್ಕ್ ಪೊಲೀಸ ಠಾಣೆಗೆ ಬಂದು ಶರಣಾಗಿದ್ದಾನೆ.

ಫೆ. 17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಮೊಹಮ್ಮದ್ ನಲಪಾಡ್ ಹಾಗೂ ಆತನ ಸ್ನೇಹಿತರು ಸೇರಿ ವಿದ್ವತ್ ಮೇಲೆ ಹಲ್ಲೆ ಮಾಡಿ ಬಳಿಕ ತೆಲೆ ಮತೆಸಿಕೊಂಡಿದ್ದರು. ಘಟನೆ ನಡೆದ ಬಳಿಕ ಪೊಲೀಸರು  ಸುಮಾರು 37 ಗಂಟೆ ಕಾಲ ತೀವ್ರ ಶೋಧ ಕಾರ್ಯ ನಡೆಸಿದ್ದರು.

ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ರವಿವಾರ ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ  ಮೊಹಮ್ಮದ್ ನಲಪಾಡ್ ಬೆಳಗ್ಗೆ ಆಟೋದಲ್ಲಿ ಬಂದು ಪೊಲೀಸರಿಗೆ ಶರಣಾಗಿದ್ದಾನೆ.

ಶಾಸಕ ಹ್ಯಾರಿಸ್ ಪುತ್ರ ನಡೆಸಿದ್ದ ಹಲ್ಲೆ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು. ಹಲ್ಲೆ ಪ್ರಕರಣ ನಂತರ ಈ ಹಿನ್ನೆಲೆಯಲ್ಲಿ ಸಂಜೆಯೊಳಗೆ ಎಲ್ಲಾ ಆರೋಪಿಗಳ ಬಂಧಿಸದಿದ್ದರೆ ಕಠಿಣ ಕ್ರಮ ಜರುಗಿಸುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದರು.

ರಾತ್ರಿ 8 ಗಂಟೆವರೆಗೂ ಬಂಧಿಸದೇ ಇದ್ದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಲು ಆದೇಶ ಹೊರಡಿಸಲಾಗಿತ್ತು.

By Suddi9

Leave a Reply

Your email address will not be published. Required fields are marked *