ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಇಲ್ಲಿನ ವಿಧಾನ ಸೌಧ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಪುರಂದರ ಹೆಗ್ಡೆ,ಸರ್ವಜ್ಞನ ಚಿಂತನೆ ಎಲ್ಲಾ ಸಮಾಜ ಕಲ್ಯಾಣದ ಉದ್ದೇಶ ಹೊಂದಿದೆ. ಸರ್ವಜ್ಞನ ಸಾಹಿತ್ಯ ಪ್ರಕಾರವನ್ನು ಉಳಿಸಲು ಶಾಶ್ವತ ಕಾರ್ಯ ನಡೆಯಬೇಕು ಎಂದು ಕರೆ ನೀಡಿದರು.
ಈ ವೇಳೆ ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ಸೇಸಪ್ಪ ಮಾಸ್ತರ್ ಸರ್ವಜ್ಞ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಯುವ ವಾಹಿನಿ ಅಧ್ಯಕ್ಷ ಸತೀಶ್ ಕುಮಾರ್, ಬಾಕುಡ ಸಮಾಜದ ಗೌರವಾಧ್ಯಕ್ಷ ಪದ್ಮನಾಭ ನರಿಂಗಾನ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ, ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮದಲ್ಲಿ ವಂದಿಸಿದರು.


