74

ಪುತ್ತೂರು: ನವ ಭಾರತ ನಿರ್ಮಾಣ ದೇಶದ ಯುವ ಜನತೆಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಲೂಕಿನ ಸ್ವಾಮಿ ವಿವೇಕಾನಂದ ಕಾಲೇಜಿಗೆ ಭೇಟಿ ನೀಡಿ “ನವ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ” ಕುರಿತು ಭಾಷನ ಮಾಡಿ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳೇ ದೇಶದ ಅಭಿವೃದ್ಧಿ ಮಾಡಬೇಕು. ಭಾರತದ ಭವಿಷ್ಯದ ಯೋಜನೆ ವಿದ್ಯಾರ್ಥಿಗಳಲ್ಲಿ ಬರಬೇಕು. ಯುವ ಮನಸ್ಸುಗಳೇ ದೇಶವನ್ನು ಮುನ್ನಡೆಸಬೇಕು ಎಂದವರು, ನಾನು ಇಲ್ಲಿ ರಾಜಕೀಯ ಮಾತನಾಡಲು ಬಂದಿಲ್ಲ. 30 ವರ್ಷಗಳ ಬಳಿಕ ನರೇಂದ್ರ ಮೋದಿ ಅವರನ್ನು ದೇಶದ ಜನತೆ ಪ್ರಧಾನಿ ಆಗಿ ಆಯ್ಕೆ ಮಾಡಿದ್ದಾರೆ. ನರೇಂದ್ರ ಮೋದಿ ಅಧಿಕಾರ ಮಾಡಲು ಬಂದಿಲ್ಲ ದೇಶದ ಅಭಿವೃದ್ದಿಗಾಗಿ ಬಂದಿದ್ದಾರೆ ಎಂದು ತಿಳಿಸಿದರು.

695d7b902000123d9fe43dc7eb6674f2

ಯುವ ಜನತೆ ದೇಶದ ಸುರಕ್ಷತೆಗೆ ಮತ್ತು ಗಡಿ ಸುರಕ್ಷತೆಯ ಬಗ್ಗೆ ಚಿಂತಿಸಬೇಕಾದ ಪರಿಸ್ಥಿತಿ ಇತ್ತು . 12 ಲಕ್ಷ ಕೋಟಿ ಹಗರಣ ದೇಶದಲ್ಲಿ ನಡೆದಿತ್ತು. ಆದರೆ ಈಗ ಎಲ್ಲಾ ಬದಲಾಗಿದೆ. 2014ರ ಲೋಕಸಭೆ ಚುನಾವಣೆ ಸುವರ್ಣ ಅಕ್ಷರದಲ್ಲಿ ಬರೆದು ಇಡುವಂತಹ ಚುನಾವಣೆ ಆಗಿದೆ ಎಂದರು.

ನರೇಂದ್ರ ಮೋದಿ ಅವರು ಸ್ಕೀಲ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಮುದ್ರಾ ಯೋಜನೆ ಸೇರಿದಂತೆ ಹಲವಾರು ಯೋಜನೆ ಯುವಕರಿಗಾಗಿ ಜಾರಿಯಾಗಿದೆ ತಂದಿದ್ದಾರೆ. ವಿಶ್ವ ಮಟ್ಟದ ವಿಶ್ವವಿದ್ಯಾನಿಲಯಗಳನ್ನು ದೇಶದಲ್ಲಿ ಸ್ಥಾಪಿಸುವ ಕೆಲಸವನ್ನು ಮೋದಿ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ನರೇಂದ್ರ ಮೋದಿ ದೇಶದ ಅಭಿವೃದ್ದಿಗಾಗಿ ಹಲವು ಕಾರ್ಯಕ್ರಮ ನೀಡಿದ್ದಾರೆ. ಅಭಿವೃದ್ಧಿ ಪರ ಮತ್ತು ಜಾತಿವಾದಿ ಮುಕ್ತ ಭಾರತ ನಿರ್ಮಾಣ ಮೋದಿ ಅವರ ಕನಸು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರಿದ್ದರು.

By suddi9

Leave a Reply

Your email address will not be published. Required fields are marked *