ಹೊಸದಿಲ್ಲಿ: ಭಾರತೀಯ ಮೊಬೈಲ್ ಸಂಖ್ಯೆಗಳ 10 ಅಂಕಿಗಳನ್ನು 13ಕ್ಕೆ ಏರಿಸಲು ಭಾರತೀಯ ದೂರವಾಣಿ ಇಲಾಖೆ ನಿರ್ಧರಿಸಿದೆ. ಈ ಕುರಿತು ನೆಟ್‌ವರ್ಕ್ ಕಂಪನಿಗಳಿಗೆ ಮೊಬೈಲ್ ಸಂಖ್ಯೆಗಳನ್ನು 13ಕ್ಕೆ ಏರಿಸಲು ಸೂಚಿಸಲಾಗಿದೆ.
ಜುಲೈ 1ರಿಂದ ಈಗಿರುವ 10 ಸಂಖ್ಯೆಗಳ ಬದಲಾಗಿ 13 ಅಂಕಿಗಳ ಮೊಬೈಲ್ ಸಂಖ್ಯೆ ಜಾರಿಗೆ ಬರಲಿದೆ. ಈಗಿರುವ ಮೊಬೈಲ್ ಸಂಖ್ಯೆಗೆ ಹೆಚ್ಚುವರಿಯಾಗಿ ಮೂರು ಅಂಕಿಗಳನ್ನು ಸೇರಿಸಲು ಸೂಚಿಸಲಾಗಿದೆ.
ಬಿಎಸ್‌ಎನ್ಎಲ್ ಸಹ 2018ರ ಡಿಸೆಂಬರೊಳಗೆ 13 ಸಂಖ್ಯೆಗಳನ್ನು ಗ್ರಾಹಕರಿಗೆ ನೀಡಲಿದೆ. ಅಕ್ಟೋಬರ್ 1ರಿಂದ ಡಿಸೆಂಬರ್ 31ರೊಳಗೆ ಈ ಬದಲಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಬಿಎಸ್ ಎನ್ ಎಲ್ ಹಿರಿಯ ಪದಾಧಿಕಾರಿಯೊಬ್ಬರು ಖಾಸಗಿ ಸುದ್ದಿವಾಹಿನಿಗೆ ಜೊತೆ ನೀಡಿದ ಸಂದರ್ಶನವೊಂದರಲ್ಲಿ ಇದನ್ನು ಖಾತರಿ ಪಡಿಸಿದ್ದಾರೆ ಎನ್ನಲಾಗಿದೆ. ಜ.8 ರಿಂದ ಮೊಬೈಲ್ ಸಂಖ್ಯೆಯ ಹೆಚ್ಚಳಕ್ಕೆ ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದಾರೆ.

