ಉಡುಪಿ : ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮಹದಾಯಿ ವಿವಾದ ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಹೇಳಲಿ, ನಂತರ ಕೇಂದ್ರದಿಂದ ಮಧ್ಯ ಪ್ರವೇಶ ಮಾಡಿ ಮಹದಾಯಿ ವಿವಾದ ಇತ್ಯರ್ಥ ಪಡಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಬಿಜೆಪಿ ಸಾಮಾಜಿಕ ಜಾಲತಾಣಿಗಳ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಮಹದಾಯಿ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಏಕೆ ಮುಂದಾಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಷಾ, ನದಿ ವಿವಾದ ಎರಡು ರಾಜ್ಯಗಳ ನಡುವಿನ ಸಮಸ್ಯೆ, ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದರು.

