1b3be0e00ae4225c4fb5d0f6786531b8

ಮಂಡ್ಯ: ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಂತ್ಯಕ್ರಿಯೆ ಇಂದು ಹುಟ್ಟೂರು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ.

 ಗ್ರಾಮಸ್ಥರೆಲ್ಲಾ ಸೇರಿ ಗುಂಡಿ ತೆಗೆಯುತ್ತಿದ್ದಾರೆ. ಈ ನಡುವೆ ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಅಂತ್ಯಕ್ರಿಯೆ ನಡೆಸಲಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷ ರೈತ ಸುರೇಶ್ ಗೌಡ ರೈತ ಮುಖಂಡರು 30 ಜಿಲ್ಲೆಗಳಿಂದ ಮಣ್ಣು ತಂದಿದ್ದಾರೆ ಎಂದು ಹೇಳಿದ್ದಾರೆ.

ಕ್ಯಾತನಹಳ್ಳಿಯಲ್ಲಿ ಸದ್ಯ ಕ್ಯಾತನಹಳ್ಳಿಯಲ್ಲಿರುವ ಪುಟ್ಟಣ್ಣಯ್ಯ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಇಡಲಾಗಿದ್ದು, ರಾಜಕೀಯ ನಾಯಕರುಗಳು ಸೇರಿದಂತೆ ತಮ್ಮ ನೆಚ್ಚಿನ ಹೋರಾಟಗಾರನ ಅಂತಿಮ ದರ್ಶನಕ್ಕೆ ಅಭಿಮಾನಿಗಳುಅಂತ್ಯ ಸಂಸ್ಕಾರಕ್ಕೆ ಆಗಮಿಸುತ್ತಿದ್ದಾರೆ.

ಇನ್ನು ಭಾನುವಾರ ಮೃತಪಟ್ಟ ಪುಟ್ಟಣ್ಣಯ್ಯ ಅವರ ಮಕ್ಕಳು ಮತ್ತು ಕುಟುಂಬ ಆಗಮನ ವಿಳಂಬ ಹಿನ್ನೆಲೆಯಲ್ಲಿ ಪುಟ್ಟಣ್ಣಯ್ಯ ಅಂತ್ಯಕ್ರಿಯೆ ವಿಳಂಬವಾಗಿತ್ತು. ಕೆನಡಾದಿಂದ ಪುಟ್ಟಣ್ಣಯ್ಯ ಸಹೋದರಿ ರೇಣುಕಾ, ಮೊದಲ ಮಗಳು ಸ್ಮಿತಾ ಹಾಗೂ ಅಳಿಯ ಬಾಲು ಆಗಮಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಿಂದ ಪುಟ್ಟಣ್ಣಯ್ಯ ತಮ್ಮ ಲೇಟ್ ರಮೇಶ್ ಪತ್ನಿ ಸುಜಾತ, ಮಕ್ಕಳಾದ ಮನು, ಮೋಹನ್ ಆಗಮಿಸಿದ್ದಾರೆ. ಯುಎಸ್‍ಎಯಿಂದ ಪುಟ್ಟಣ್ಣಯ್ಯರ ಎರಡನೇ ಮಗಳ ಕುಟುಂಬ ಮಗಳು ಅಕ್ಷತಾ, ಅಳಿಯ ಶ್ರೀನಿವಾಸ್ ಬಂದಿದ್ದಾರೆ.

ಪುಟ್ಟಣ್ಣಯ್ಯ ಮೌಢ್ಯ ವಿರೋಧಿಯಾದ ಕಾರಣ ಯಾವುದೇ ವಿಧಿವಿಧಾನಗಳಿಲ್ಲದ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ನಂತರ ತೆಂಗಿನ ತೋಟದಲ್ಲಿ ಅವರ ತಂದೆ ಮತ್ತು ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಅಂತ ತಿಳಿದು ಬಂದಿದೆ.

 

By Suddi9

Leave a Reply

Your email address will not be published. Required fields are marked *