ರಾಮನಗರ: ಪುರುಷತ್ವ ಪರೀಕ್ಷೆ ಹಿನ್ನಲೆ ಬಿಡದಿ ಮಠದ ಸ್ವಾಮೀಜಿ ನಿತ್ಯಾನಂದ ರಾಮನಗರದ ಸಿಜೆಎಂ ನ್ಯಾಯಾಲಯಕ್ಕೆ ಸೋಮವಾರ ಹಾಜರಾಗಿದ್ದು, ಪುರುಷತ್ವ ಪರೀಕ್ಷೆ ವಿಚಾರಣೆಯನ್ನು ಆಗಸ್ಟ್ 23.ಕ್ಕೆ ಮುಂದೂಡಲಾಗಿದೆ. ನ್ಯಾಯಾಲಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು,

nithya

ಆಗಸ್ಟ್ 18ರಂದು ರಾಮನಗರ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ನಿತ್ಯಾನಂದ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ನಿತ್ಯಾನಂದ ಇಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಸೆಷನ್ ನ್ಯಾಯಾಲಯವು ಪುರಷತ್ವ ಪರೀಕ್ಷೆಯ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದೆ. ರಾಸಲೀಲೆ ಹಾಗೂ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ನಿತ್ಯಾನಂದನಿಗೆ ನಡೆಸಬೇಕಿದ್ದ ಪುರುಷತ್ವ ಪರೀಕ್ಷೆಯನ್ನು ಸುಪ್ರೀಂ ಮುಂದೂಡಿತ್ತು.
ಆಗಸ್ಟ್ 6ರಂದು ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಹಾಜರಾಗಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.ದನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ನಾಳೆ ನಡೆಯಬೇಕಿದ್ದ ಪುರುಷತ್ವ ಪರೀಕ್ಷೆಗೆ ತಡೆಯಾಕಿತ್ತು.
ಆದರೆ ಆಗಸ್ಟ್ 18ರಂದು ರಾಮನಗರ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ನಿತ್ಯಾನಂದ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು.

By Suddi9

Leave a Reply

Your email address will not be published. Required fields are marked *