ನೆಲಮಂಗಲ: ಲಾರಿ, ಬಸ್ ಹಾಗೂ ಜೀಪ್ ನಡುವೆ ನಡೆದ ಪರಿಣಾಮ ಜೀಪ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ತಾಲೂಕಿನ ತಿಪ್ಪಗೊಂಡನಹಳ್ಳಿಯ ಬಳಿ ಶುಕ್ರವಾರ ನಡೆದಿದೆ.
ಅಜಾರೂಕತೆಯಿಂದ ಬಂದ ಲಾರಿ ಚಾಲಕ ಮುಂದಿನಿಂದ ಬರುತ್ತಿದ್ದ ಬೊಲೆರೋ ಜೀಪ್ ಹಾಗೂ ಬಸ್ ಗೆ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.
ಇನ್ನು ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

