ಮಂಗಳೂರು: ಮಾ. 6ರಂದು ಮಂಗಳೂರಿನ ಪುರಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ಗೆ ಅಧಿಕೃತವಾಗಿ ಸೇರಲಿದ್ದೆನೆ ಎಂದು ಮಾಜಿ ಮೇಯರ್ ಕೆ.ಅಶ್ರಫ್ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 2ಕ್ಕೆ ಬಂದರಿನಿಂದ ಬೃಹತ್ ಮೆರವಣಿಗೆ ಮೂಲಕ ಪುರಭವನಕ್ಕೆ ಬಂದು ಬಳಿಕ ಸಂಜೆ 4ಕ್ಕೆ ಸಮಾವೇಶ ನಡೆಯಲಿದೆ. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದಿದ್ದಾರೆ.

