ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಈಗಾಗಲೇ ಎರಡು ಬಾರಿ ರಾಜ್ಯ ಪ್ರಚಾರ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಾಳೆಯಿಂದ ಬೀದರ್ ಪ್ರವಾಸ ಹಮ್ಮಿಕೊಂಡಿದ್ದಾರೆ.
ಫೆ. 24 ಮತ್ತು 25 ರಂದು ಎರಡು ದಿನ ಬೀದರ್ ನಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದು, ರೈತರ ಜೊತೆ ಸಂವಾದ, ನವಶಕ್ತಿ ಸಮಾವೇಶ ನಡೆಸಲಿದ್ದಾರೆ. ಬೀದರ್ ನ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

