ಮಂಗಳೂರು:ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 16ನೇ ಶ್ರಮದಾನ ಅತ್ತಾವರದಲ್ಲಿ ನಡೆಯಿತು.
ಕೆಎಂಸಿ ಆಸ್ಪತ್ರೆಯ ಆಪರೇಶನ್ಸ್‍ನ ಸೀನಿಯರ್ ಮೆನೇಜರ್ ರವಿರಾಜ್ ಹಾಗೂ ಅನಿರುದ್ಧ ನಾಯಕ್ 16ನೇ ಶ್ರಮದಾನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಮಿಸೆಸ್ ಗ್ರೇಸಿ ಲೋಬೊ, ಇಮ್ತಿಯಾಜ್ ಅಹ್ಮದ್, ನಝೀರ್ ಅಹ್ಮದ್ ಇದ್ದರು.ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ವಾಗತಿಸಿದರು.

19mng12g
ಸ್ವಚ್ಛತೆ: ಸ್ವಯಂ ಸೇವಕರು ಅತ್ತಾವರ ಕಟ್ಟೆಯ ಸುತ್ತಮುತ್ತಲಿನ ರಸ್ತೆಗಳಲ್ಲಿ ಬಿದ್ದಿದ್ದ ಕಸತ್ಯಾಜ್ಯವನ್ನು ಹೆಕ್ಕಿ ಕಸಗುಡಿಸಿ ಸ್ವಚ್ಛಗೊಳಿಸುತ್ತಿದ್ದರೆ ಕೆಎಂಸಿ ಆಸ್ಪತ್ರೆಯ ಸಿಬ್ಬಂದಿಗಳು ಡಾ. ಸಿಂಧು ಸುರೇಂದ್ರ ಜತೆಗೂಡಿ ಅತ್ತಾವರ ಕಟ್ಟೆಯಿಂದ ಕೆಎಂಸಿ ಸಾಗುವ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸಿದರು. ಎಸ್. ಎಂ. ಕುಶೆ ವಿದ್ಯಾರ್ಥಿಗಳು ಅಧ್ಯಾಪಕ ಪ್ರತಿಮ ಕುಮಾರ್ ಮಾರ್ಗದರ್ಶನದಲ್ಲಿ ಎಸ್. ಎಂ. ಕುಶೆ ಶಾಲೆಯತ್ತ ಸಾಗುವ ಮಾರ್ಗ ಹಾಗೂ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದರು.

19mng12d
ಅನಿಲ್ ಕುಮಾರ್ ಅತ್ತಾವರ ಹಾಗೂ ಸ್ಥಳೀಯ ನಾಗರಿಕರು ರೈಲ್ವೇ ನಿಲ್ದಾಣದತ್ತ ಸಾಗುವ ಮಾರ್ಗವನ್ನು ಹಾಗೂ ಅಕ್ಕಪಕ್ಕದ ಜಾಗಗಳಲ್ಲಿ ಸ್ವಚ್ಛತೆ ನಡೆಸಿದರು. ಸಾಮಾಜಿಕ ಕಾರ್ಯಕರ್ತ ಸೌರಜ್ ಮಂಗಳೂರು ನೇತೃತ್ವದಲ್ಲಿ ಅನದಿಕೃತ ಬ್ಯಾನರ್, ಪೆÇೀಸ್ಟರ್‍ಗಳನ್ನು ತೆರವುಗೊಳಿಸುವ ಕಾರ್ಯ ನಡೆಯಿತು. ಅಧ್ಯಾಪಕಿ ಪ್ರಜ್ಞಾಶ್ರೀ ಮತ್ತು ಎಸ್. ಎಂ. ಕುಶೆ ಶಾಲಾ ವಿದ್ಯಾರ್ಥಿಗಳು ವೈದ್ಯನಾಥ ನಗರದ ಮನೆಮನೆಗಳಿಗೆ ತೆರಳಿ ಸ್ವಚ್ಛತೆಯ ಕುರಿತ ಮಾಹಿತಿಯುಳ್ಳ ಕರಪತ್ರಗಳನ್ನು ವಿತರಿಸಿ ಸಾರ್ವಜನಿಕರು ತಮ್ಮ ಮನೆ ಹಾಗೂ ಪರಿಸರವನ್ನು ಸ್ವಚ್ಛವಾಗಿಸಿರಿಸಿಕೊಳ್ಳುವಂತೆ ಮನವಿ ಮಾಡಿದರು.

19mng12a
ಜನೋಪಯೋಗಿ ಕಾರ್ಯ: ನಗರದ ಹಲವೆಡೆ ಜನರು ಇನ್ನೂ ತ್ಯಾಜ್ಯವನ್ನು ರಸ್ತೆಯ ಬದಿ ಹಾಕುತ್ತಿರುವುದರಿಂದ ನಗರ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಅದನ್ನು ಪರಿಹರಿಸಬೇಕೆಂಬ ನಿಟ್ಟಿನಲ್ಲಿ ಸ್ವಚ್ಛ ಮಂಗಳೂರು ಸ್ವಯಂ ಸೇವಕರು ಅನೇಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅದೆ ರೀತಿ ಅತ್ತಾವರ ಸೆಂಟರ್ ಎದುರಿನ ಕಾಲುದಾರಿಯಲ್ಲಿ ಕೆಲವು ಜನ ತ್ಯಾಜ್ಯವನ್ನು ಹಾಕುವ ಪರಿಣಾಮ ಜನರು ಪುಟ್‍ಪಾಥ್‍ನ್ನು ಬಳಸಲಾಗುತ್ತಿರಲಿಲ್ಲ. ಇಂದು ಅಶೋಕ ಸುಬ್ಬಯ್ಯ, ದೀಪಕ ಮೇಲಂಟ ಹಾಗೂ ಸ್ವಚ್ಛ ಮಂಗಳೂರು ಕಾರ್ಯಕರ್ತರು ಅಲ್ಲಿ ಹಲವು ದಿನಗಳಿಂದ ಸಂಗ್ರಹವಾಗಿದ್ದ ತ್ಯಾಜ್ಯವನ್ನು ತೆಗೆದು ಕಾಲುದಾರಿ ಕಣ್ಣಿಗೆ ಕಾಣುವಂತೆ ಮಾಡಿದರು.

19mng12e
ಅಲ್ಲದೆ ಅದರ ಇನ್ನೊಂದು ಭಾಗದಲ್ಲಿ ಆಗಾಗ ಎತ್ತರ ಪ್ರದೇಶದ ಮಣ್ಣು ಜರಿದು ಯಾವಾಗಲೂ ಪುಟ್‍ಪಾಥ್ ಮೇಲೆ ಬೀಳುತ್ತಿತ್ತು. ತತ್ಪರಿಣಾಮ ಕಾಲುದಾರಿ ನಿಷ್ಪ್ರಯೋಜಕವಾಗುತ್ತಿತ್ತು. ಪುನ: ಪುನ: ಮಣ್ಣು ಜರಿದು ಬೀಳದಂತೆ ಅದಕ್ಕೆ ಗಟ್ಟಿಯಾಗಿ ಕಲ್ಲಿನ ತಡೆಗೋಡೆಯನ್ನು ಕಟ್ಟಿ, ಮಣ್ಣುಕಲ್ಲುಗಳನ್ನು ತೆಗೆದು ಪಾದಚಾರಿಗಳಿಗೆ ಹಾಗೂ ಬಸ್ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಯಿತು. ಆ ಸ್ಥಳವನ್ನು ಅಂದಗಾಣಿಸಲು ಒಂದಿಷ್ಟು ಹೂಕುಂಡಗಳನ್ನಿಡಲಾಗಿದೆ. ಇವತ್ತಿನಿಂದ ತ್ಯಾಜ್ಯ ಬೀಳುವುದು ನಿಲ್ಲುವವರೆಗೂ ಪ್ರತಿದಿನ ಅಲ್ಲಿನ ಜನರ ಮನೆಗಳಿಗೆ ತೆರಳಿ ಜಾಗೃತಿ ಮಾಡುವ ಅಭಿಯಾನ ಜಾರಿಯಲ್ಲಿರುತ್ತದೆ. ಇಂತಹ ಮಾದರಿಗಳನ್ನು ಹಲವೆಡೆ ಮಾಡಿ ಯಶಸ್ವಿಯಾದ ಹಿನ್ನಲೆಯಲ್ಲಿ ಈ ಕ್ರಮವನ್ನು ಅನುಸರಿಸಲಾಯಿತು. ಮುಂದಿನ ವಾರ ಅಲ್ಲಿ ಕುಳಿತುಕೊಳ್ಳಲು ಸರಳ ಬೆಂಚುಗಳನ್ನು ಅಳವಡಿಸಲು ಯೋಜಿಸಲಾಗಿದೆ.
ಸ್ವಚ್ಛ ಗ್ರಾಮ ಅಭಿಯಾನ: ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 100 ಗ್ರಾಮಗಳಲ್ಲಿ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಪುತ್ತೂರು, ಮಂಜನಾಡಿ, ಕಾಯರ್ತಡ್ಕ, ಅತಿಕಾರಿಬೆಟ್ಟು ಸೋಮೇಶ್ವರ, ಮೇರ್ಲಪದವು, ಕಿನ್ಯಾ, ಉಳ್ಳಾಲ, ಮಲ್ಲೂರು, ಉಳಾಯಿಬೆಟ್ಟು, ಬಜ್ಪೆ, ಮೆನ್ನಬೆಟ್ಟು, ವಾಲ್ಪಾಡಿ ಸೇರಿದಂತೆ ಹಲವೆಡೆ ಸ್ವಚ್ಛ ಗ್ರಾಮ ಅಭಿಯಾನ ನಡೆದವು. ಸ್ವಚ್ಛ ಭಾರತ ಮಿಷನ್ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕಿ ಮಂಜುಳಾ, ನವೀನ ಕೊಣಾಜೆ ಹಾಗೂ ಮಹೇಶ್ ಕೊಲ್ಯ ಸ್ವಚ್ಛ ಗ್ರಾಮ ಅಭಿಯಾನವನ್ನು ಸಂಯೋಜಿಸಿದರು.

19mng12f

———
ಕೊಟ್-
ಲಕ್ಷ್ಮಣ ಕುಂದರ್, ಅಫ್ಜಲ್, ಸತೀಶ್ ಭಟ್ ಹಾಗೂ ಕೆಎಂಸಿ ಆಸ್ಪತ್ರೆಯ ಸುಮಾರು ಎಪ್ಪತ್ತು ಸಿಬ್ಬಂದಿ ಸೇರಿದಂತೆ ಅನೇಕರು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು. ಸ್ವಚ್ಛತಾ ಕಾರ್ಯದ ಬಳಿಕ ಕಾರ್ಯಕರ್ತರಿಗೆ ಚಕ್ರಪಾಣಿ ದೇವಸ್ಥಾನದಲ್ಲಿ ಚಹಾತಿಂಡಿ ವ್ಯವಸ್ಥೆ ಮಾಡಲಾಯಿತು. ಅಕ್ಷಿತ್ ಅತ್ತಾವರ ಅಭಿಯಾನವನ್ನು ಸಂಯೋಜಿಸಿದರು. ಈ ಅಭಿಯಾನಕ್ಕೆ ಎಂಆರ್‍ಪಿಎಲ್ ಹಾಗೂ ನಿಟ್ಟೆ ಸಂಸ್ಥೆಗಳು ಪ್ರಾಯೋಜಕತ್ವ ನೀಡಿ ಸಹಕರಿಸುತ್ತಿವೆ.
– ಸ್ವಾಮಿ ಚಿದಂಬರಾನಂದ, ಪ್ರಧಾನ ಸಂಚಾಲಕರು, ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿüಯಾನ

By Suddi9

Leave a Reply

Your email address will not be published. Required fields are marked *