WhatsApp-Image-2018-02-24-at-5.28.40-PM-1

ಬಂಟ್ವಾಳ: ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಬಂಟ್ವಾಳ ಠಾಣಾ ಪೊಲೀಸರು ಇಲ್ಲಿನ ಬಿ.ಸಿ.ರೋಡ್ ಕೈಕಂಬದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಬಿ.ಸಿ.ರೋಡ್ ನಿವಾಸಿ ಶಮೀರ್ ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ?: ತಾಲೂಕಿನ ಫರಂಗಿಪೇಟೆಯಲ್ಲಿ ಫೆ.22 ರ ತಡರಾತ್ರಿ ಇರ್ಫಾನ್ ಎಂಬಾತನಿಗೆ ಆರೋಪಿ ಶಮೀರ್ ಚೂರಿ ಇರಿದು ತಲೆಮರೆಸಿಕೊಂಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಬಂಟ್ವಾಳದ ಕೈಕಂಬದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

By Suddi9

Leave a Reply

Your email address will not be published. Required fields are marked *