ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ಕಾಣೆಯಾಗಿದ್ದ 5 ವರ್ಷದ ಬಾಲಕಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಮೃತ ಬಾಲಕಿಯನ್ನು ಗ್ರಾಮದ ಹುಲಿಗಪ್ಪ ಎಂಬುವವರ ಪುತ್ರಿ ಜ್ಯೋತಿ ಎಂದು ಗುರುತಿಸಲಾಗಿದೆ.
ಈಕೆ ನಿನ್ನೆ ಸಂಜೆ ಕಾಣೆಯಾಗಿದ್ದಳು. ಘಟನೆ ನಡೆದ ಸ್ಥಳಕ್ಕೆ ತುರ್ವಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

