rahul-gandhi

ಬೆಳಗಾವಿ: ನರೇಂದ್ರ ಮೋದಿಯವರು 20 ಲಕ್ಷ ಬಡವರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ ನಿರುದ್ಯೋಗ ಸಮಸ್ಯೆ ಕಡಿಮೆಯಾಗಿಲ್ಲ. ನೀರವ್ ಮೋದಿಯಂಥವರು ದೇಶವನ್ನು ಕೊಳ್ಳೆಹೊಡೆದು ಹೋಗುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಶನಿವಾರ ಜಿಲ್ಲೆಯ ಅಥಣಿಯಲ್ಲಿ ಆಯೋಜಿಸಿದ್ದ  ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ನುಡಿದಂತೆಯೇ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಬಡವರಿಗೆ ಏನು ಭರವಸೆ ನೀಡಿತ್ತೋ ಅದನ್ನು ಮಾಡುತ್ತಿದೆ. ಬಸವಣ್ಣನವರ ನುಡಿದಂತೆ ನಡೆ ವಚನವನ್ನು ನಾವು ಪಾಲಿಸಿದ್ದೇವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಎಂದಾದರೂ ತಾವು ನುಡಿದಂತೆ ನಡೆದಿದ್ದಾರಾ ಎಂದು ಪ್ರಶ್ನಿಸಿದರು.

ಮೋದಿಯವರು 15 ಲಕ್ಷ ಪ್ರತಿಯೊಬ್ಬರಿಗೆ ಕೊಡುತ್ತೇನೆ ಎಂದಿದ್ದರು. ಆದರೆ, ಕೊಡಲಿಲ್ಲ. ಒಂದು ವರ್ಷದಲ್ಲಿ ಭಾರತದಲ್ಲಿರುವ ಎಲ್ಲಾ ಬಡವರ ಖಾತೆಗೆ ಹದಿನೈದು ಲಕ್ಷ ತಂದು ಹಾಕುತ್ತೇನೆ ಎಂದರು. ಆದರೆ ಆ ಕೆಲಸವನ್ನು ಕೂಡ ಮಾಡಿಲ್ಲ. ಮೋದಿ ಜನರಿಗೆ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ  ಎಂದು ದೂರಿದರು.

 

By Suddi9

Leave a Reply

Your email address will not be published. Required fields are marked *