ಮಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ನಗರದ ಕೊಡಿಯಾಲ್ ಗುತ್ತು ಫ್ಲಾಟ್ ವೊಂದರಲ್ಲಿ ಬಂಧಿಸುವಲ್ಲಿ ಸೋಮವಾರ ಯಶಸ್ವಿಯಾಗಿದ್ದಾರೆ.
ನಗರದ ಅಡ್ಯಾರ್ ಪದವು ನಿವಾಸಿ ರಿಯಾಝ್ ಅಹಮ್ಮದ್ (35) ಹಾಗೂ ಅಪರಿಚಿತ ಮಹಿಳೆ ಎಂದು ಗುರುತಿಸಲಾಗಿದೆ.
ಫ್ಲಾಟ್ ನಲ್ಲಿ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಪಾರ್ಟ್ ಮೆಂಟ್ ಫ್ಲಾಟ್ ವೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ಆರೋಪಿ ಮಹಿಳೆ ಫ್ಲಾಟ್ ನಲ್ಲಿ ವಾಸ್ತವ್ಯವಿದ್ದು, ಯುವತಿಯರನ್ನು ಈ ಫ್ಲಾಟ್ ನಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ದಾಳಿಯಲ್ಲಿ ಫ್ಲಾಟ್ ನಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ರಕ್ಷಿಸಲಾಗಿದೆ.

