ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ಫೆ.28ರಂದು ಖಾಸಗಿ ಬಸ್ ನಿಲ್ದಾಣದ ಶಂಕು ಸ್ಥಾಪನೆ ಇಲ್ಲಿನ ತಾ.ಪಂ. ಹಳೆ ಕಟ್ಟಡದ ಬಳಿ ನಡೆಯಲಿದೆ.
ಅಂದು ಬೆಳಗ್ಗೆ 10ಕ್ಕೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ನೆರವೇರಿಸಲಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಗೌರವ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕಿ ಶಕುಂತಳಾ, ದ.ಕ.ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಗೋಡು, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ತಾ.ಪಂ. ಅಧ್ಯಕ್ಷ ಕೆ.ಚಂದ್ರಹಾಸ ಕರ್ಕೇರ, ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ, ಬಂಟ್ವಾಳ ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
