ಕಲಬುರಗಿ : ಹುತಾತ್ಮ ಪಿಎಸ್ಸೈ ಮಲ್ಲಿಕಾರ್ಜುನ್ ಬಂಡೆ ಅವರ ಇಬ್ಬರು ಮಕ್ಕಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದತ್ತು ಪಡೆದಿದ್ದು, ಇಬ್ಬರು ಮಕ್ಕಳ ಪೂರ್ಣ ಪ್ರಮಾಣದ ಶಿಕ್ಷಣದ ವೆಚ್ಚವನ್ನು ನೋಡಿಕೊಳ್ಳಲಿದ್ದೇನೆ ಎಂದು ಬಹಿರಂಗವಾಗಿ ತಿಳಿಸಿದ್ದಾರೆ.
ಬಿಜೆಪಿ ವಿಭಾಗೀಯ ಮಟ್ಟದ ಕಾರ್ಯಕರ್ತರ-ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಬಂಡೆ ಮಕ್ಕಳ ಪರಿಸ್ಥಿತಿಯ ಬಗ್ಗೆ ಶಾ ಗಮನಕ್ಕೆ ತಂದಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಶಾ, ಮಕ್ಕಳು ಶಿಕ್ಷಣದ ಸಂಪೂರ್ಣ ವೆಚ್ಚ ಪಕ್ಷವೇ ಭರಿಸುವುದರ ಜತೆಗೆ ಇಬ್ಬರು ಮಕ್ಕಳನ್ನು ದತ್ತು ಪಡೆಯುವುದಾಗಿ ಘೋಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

