voting-representational

ಬೆಂಗಳೂರು: ಏ.15ರ ಬಳಿಕ ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣೆ ಆಯುಕ್ತ ಒ.ಪಿ. ರಾವತ್ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಮಾರ್ಚ್ ಅಥವಾ ಏಪ್ರಿಲ್ ಎರಡನೇ ವಾರದೊಳಗೆ ರಾಜ್ಯದಲ್ಲಿ ಶಾಲಾ ಕಾಲೇಜುಗಳ ಬಹುತೇಕ ಎಲ್ಲ ಪರೀಕ್ಷೆಗಳು ಪೂರ್ಣಗೊಳ್ಳಲಿದ್ದು, ಆ ಬಳಿಕ ವೇಳಾಪಟ್ಟಿ ಪ್ರಕಟಿಸಲಾಗುವುದು.

ಕರ್ನಾಟಕ ಚುನಾವಣೆಗೆ ಸಂಬಂಧಪಟ್ಟಂತೆ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯ ಪ್ರವಾಸ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *