ಧಾರವಾಡ: ದಾವಣಗೆರೆಯಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಧಾರವಾಡದ ಪ್ರಮುಖ ಬಿಜೆಪಿ ಮುಖಂಡರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಮಾಜಿ ಶಾಸಕಿ ಸೀಮಾ ಮಸೂತಿ, ಮಹೇಶ ಟೆಂಗಿನಕಾಯಿ, ಶಿವಾನಂದ ಮುತ್ತಣ್ಣವರ, ಬಿಜೆಪಿ ರಾಜ್ಯ ಸ್ಲಂ ಮೋರ್ಚಾದ ಉಪಾಧ್ಯಕ್ಷ ಈರೇಶ ಅಂಚಟಗೇರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಶಿಷ್ಟಾಚಾರದ ಪ್ರಕಾರ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಹಾಗೂ ಮೇಯರ್ ಡಿ.ಕೆ.ಚೌಹಾಣ್ ಕೂಡ ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ನಂತರ ಪ್ರಧಾನಿ ಮೋದಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಿದರು.

