ಮುಂಬೈ: ಬಹುಭಾಷ ನಟಿ ಶ್ರೀದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚಿತ್ರರಂಗದ ಗಣ್ಯರು, ಅಭಿಮಾನಿಗಳ ದಂಡು ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ಮುಂಬೈನ ಪಶ್ಚಿಮ ಅಂಧೇರಿಯ ಸೆಲೆಬ್ರೇಷನ್ ಸ್ಪೋಟ್ಸ್ ಕ್ಲಬ್ ನಲ್ಲಿ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯ ಮಂದಿ ಆಗಮಿಸಿದ್ದಾರೆ. ಬಾಲಿವುಡ್ ಮಾತ್ರವಲ್ಲದೇ ವಿವಿಧ ಚಿತ್ರರಂಗಗಳ ಗಣ್ಯರು, ಕಲಾವಿದರು, ತಂತ್ರಜ್ಞರು, ರಾಜಕೀಯ ನಾಯಕರು ಆಗಮಿಸಿ ಅಂತಿಮ ದರ್ಶನ ಪಡೆದು ಶ್ರೀದೇವಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸಾರ್ವಜನಿಕ ದರ್ಶನದ ಬಳಿಕ ವಿಲೆ ಪಾರ್ಲೆಯಲ್ಲಿರುವ ಸೇವಾ ಸಮಾಜ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು. ದುಬೈನಲ್ಲಿ ನಡೆದ ಸಂಬಂಧಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶ್ರೀದೇವಿ ಶನಿವಾರ ರಾತ್ರಿ ಆಕಸ್ಮಿಕವಾಗಿ ಬಾತ್ ಟಬ್ ಗೆ ಬಿದ್ದು ಸಾವನ್ನಪ್ಪಿದ್ದರು. ಪೊಲೀಸ್ ತನಿಖೆ, ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಮಂಗಳವಾರ ರಾತ್ರಿ ಮುಂಬೈಗೆ ಪಾರ್ಥಿವ ಶರೀರವನ್ನು ತರಲಾಗಿದೆ.

