ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಕಲು ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ಅರ್ಥಶಾಸ್ತ್ರ ಪರೀಕ್ಷೆ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರು. ಅರ್ಥಶಾಸ್ತ್ರ ಪರೀಕ್ಷೆಗೆ 3,44,578 ವಿದ್ಯಾರ್ಥಿಗಳು ಹಾಜರಾಗಿದ್ದರೆ, 20,772 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿದೆ.

