raped-child-1

ಮೈಸೂರು: ನಗರದ ಹೊರವಲಯದಲ್ಲಿ 8 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದು,  ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಕಳೆದ 20 ದಿನಗಳ ಹಿಂದೆ ನಗರದ ಹೊರವಲಯದಲ್ಲಿ ಘಟನೆ ನಡೆದಿದೆ. 2 ನೇ ತರಗತಿ ಬಾಲಕಿಯ ಮೇಲೆ 17, 14 ಹಾಗೂ 13 ವರ್ಷದ ಇಬ್ಬರು ಸೇರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಯಾರಿಗಾದರು ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಘಟನೆಯಿಂದ ತೀವ್ರ ಖಿನ್ನತೆಗೊಳಗಾದ ಬಾಲಕಿ ಆರೋಗ್ಯದಲ್ಲಿ ಏರುಪೇರಾಗಿದೆ.  ಪೋಷಕರು ವಿಚಾರಿಸಿದಾಗ ನಡೆದಿರುವ ವಿಷಯ ತಿಳಿಸಿದ್ದಾಳೆ.

ಬಾಲಕಿಯ ಪೋಷಕರು ದೂರು ನೀಡಿದ್ದು, ಬಾಲಕರ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಲ್ವರು ಬಾಲಕರನ್ನು ಬಂಧಿಸಿ ವೀಕ್ಷಣಾಲಯಕ್ಕೆ ರವಾಣೆ ಮಾಡಿದ್ದಾರೆ.

By suddi9

Leave a Reply

Your email address will not be published. Required fields are marked *