ದೇರಳಕಟ್ಟೆ: ಪ್ರತಿಪಕ್ಷ ಕಾಂಗ್ರೆಸ್ ಮುಕ್ತ ಕರ್ನಾಟಕ ಎಂದು ಜಪಿಸುತ್ತಿದ್ದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಸಿವು ಮುಕ್ತ ಕರ್ನಾಟಕ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಇಲ್ಲಿನ ಬೆಳ್ಮ ಗ್ರಾಮ ಪಂಚಾಯತ್ ನ ನೂತನ ಕಚೇರಿಯ ಕಟ್ಟಡವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಗಾಂಧೀಜಿ ರಾಮರಾಜ್ಯದ ಕನಸು ಕಂಡಿದ್ದು, ಈ ಕನಸು ಬೆಳ್ಮ ಗ್ರಾಮದಲ್ಲಿ ನಿಜವಾಗುತ್ತಿದ್ದು, ಇಲ್ಲಿ ಏಕತೆಯಲ್ಲಿ ಮುನ್ನಡೆದುಕೊಂಡು ಹೋಗುತ್ತಿರುವ ಗ್ರಾಮವಾಗಿದೆ. ಗಾಂಧೀಜಿ ಕಂಡ ಗ್ರಾಮದ ಅಭಿವೃದ್ಧಿ ಮತ್ತು ರಾಮ ರಾಜ್ಯ ಎಂಬ ಮಾತು ಇಲ್ಲಿ ನಿಜವಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಮಲಾರ್, ವಕ್ಪ್ ಜಿಲ್ಲಾಧ್ಯಕ್ಷ ಯು. ಕೆ. ಮೋನು , ಕಾಂಗ್ರೆಸ್ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಎನ್. ಎಸ್. ಕರೀಂ, ಮತ್ತಿತರರು ಉಪಸ್ಥಿತರಿದ್ದರು.

