13-tsunami-kitty

ಬೆಂಗಳೂರು: ಅಪಹರಣ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ‘ಇಂಡಿಯನ್‌’ ರಿಯಾಲಿಟಿ ಶೋ ಖ್ಯಾತಿಯ ನಟ ಸುನಾಮಿ ಕಿಟ್ಟಿ ಸೇರಿದಂತೆ ಮೂವರನ್ನು ಶನಿವಾರ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಧ್ಯಮವೊಂದು ವರದಿ ಮಾಡಿರುವಂತೆ ರೆಸ್ಟೋರೆಂಟ್ವೊಂದರಲ್ಲಿ ನಟ ಕಿಟ್ಟಿ ಮತ್ತಿತರರು, ಸಪ್ಲೈಯರ್ ಗಿರೀಶ್ ಎಂಬುವವರಿಗೆ ಗನ್ ತೋರಿಸಿ, ಬೆದರಿಸಿರುವುದಾಗಿ ಪ್ರಕರಣವೊಂದು ದಾಖಲಾಗಿತ್ತು. ಇದೀಗ ಅದೇ ಗಿರೀಶ್ ಎಂಬಾತನನ್ನು ಕಿಟ್ಟಿ ಮತ್ತು ತಂಡ ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಸಂಬಂಧ ಇಂದು ಕಾರ್ಯಾಚರಣೆ ನಡೆಸಿದ ಜ್ಞಾನಭಾರತಿ ಪೊಲೀಸರು ಸುನಾಮಿ ಕಿಟ್ಟಿ. ಅರ್ಜುನ್ ಮತ್ತು ಯೋಗೇಂದ್ರ ಎಂಬುವವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ಗಿರೀಶ್ ನಾಪತ್ತೆಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

By Suddi9

Leave a Reply

Your email address will not be published. Required fields are marked *