ಕಲಬುರಗಿ: ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತರನ್ನು ಮಡಕಿ ಗ್ರಾಮದ ನಿವಾಸಿ ಬಾಬುರಾವ್ (55) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ ಎಮದು ತಿಳಿದು ಬಂದಿದೆ.
ಈ ಬಗ್ಗೆ ಎಂ.ಬಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

