ಹಾಸನ : ಬೈ ಕ್ ಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಅರೆಮಾದನ ಹಳ್ಳಿ ಬಳಿ ನಡೆದಿದೆ.
ಶನಿವಾರಸಂತೆ ಬಳಿಯ ಯಡಿಯೂರಿನ ನಿವಾಸಿ ಚೇತನ್ (20) ಎಂದು ಮೃತಪಟ್ಟ ವಿದ್ಯಾರ್ಥಿ ಗುರುತಿಸಲಾಗಿದೆ.
ಅರಕಲಗೂಡಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಚೇತನ್, ಬೈಕ್ ನಲ್ಲಿ ತೆರೆಳುತ್ತಿದ್ದ ವೇಳೆ ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

