Conrad_SangmaMar06-300x225

ಶಿಲ್ಲಾಂಗ್‌‌: ಮೇಘಾಲಯದ ಹನ್ನೆರಡನೇ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಮಂಗಳವಾರ  ಅಧಿಕಾರ ಸ್ವೀಕರಿಸುವುದರೊಂದಿಗೆ ಹತ್ತು ವರ್ಷಗಳ ಕಾಂಗ್ರೆಸ್ ಆಡಳಿತಕ್ಕೆ ತೆರೆ ಬಿದ್ದಿದೆ.

ಶನಿವಾರ ಪ್ರಕಟಗೊಂಡ ಚುನಾವಣೆ ಫಲಿತಾಂಶದ ಬೆನ್ನಲ್ಲೇ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಅವರಿಗೆ ಸರಕಾರ ರಚಿಸುವಂತೆ ರಾಜ್ಯಪಾಲ ಗಂಗಾ ಪ್ರಸಾದ  ಆಹ್ವಾನ ನೀಡಿದ್ದರು. ಸಂಗ್ಮಾ  34 ಶಾಸಕರ ಬೆಂಬಲದೊಂದಿಗೆ ನೂತನ ಸರಕಾರ ರಚಿಸಿದ್ದಾರೆ.

ರಾಜಭವನದಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಸಚಿವ ರಾಜನಾಥಸಿಂಗ್, ಭಾರತೀಯ ಜನತಾಪಕ್ಷದ ರಾಷ್ಟ್ರೀಯ  ಅಧ್ಯಕ್ಷ  ಅಮಿತ ಶಾ, ಆಸ್ಸಾಂನ ಹಣಕಾಸು ಸಚಿವ ಹಿಮಂತ ಬಿಸ್ವಾ ಸರ್ಮಾ ಮತ್ತು ಇತರರು ಪಾಲ್ಗೊಂಡಿದ್ದರು.

“ಕೈ’ ಗೆ ತಪ್ಪಿದ ಅಧಿಕಾರ: ಒಟ್ಟು 60 ಸದಸ್ಯ ಬಲದ ಮೇಘಾಲಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 21 ಸ್ಥಾನಗಳನ್ನು ಪಡೆದುಕೊಂಡು ಮೊದಲ ಸ್ಥಾನದಲ್ಲಿದ್ದರೂ ಅಧಿಕಾರದ ಗದ್ದುಗೆ ಏರುವಲ್ಲಿ ವಿಫಲವಾಯಿತು.

ಸ್ಪಷ್ಟ ಬಹುಮತಕ್ಕೆ ಅವಶ್ಯವಿದ್ದ 31 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಯಾವ ಪಕ್ಷವೂ ಯಶಸ್ಸು ಕಾಣಲಿಲ್ಲ. 19 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದ್ದ ಎನ್ ಪಿ ಪಿ,  ಕೊನೆ ಗಳಿಗೆಯಲ್ಲಿ ನಡೆದ ಬೆಳವಣಿಗೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಯುಡಿಪಿ), ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ (ಪಿಡಿಎಫ್), ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಎಚ್ಎಸ್ಪಿಡಿಪಿ) ಹಾಗೂ ಬಿಜೆಪಿ ಶಾಸಕರ ನೆರವಿನೊಂದಿಗೆ ಕಾಂಗ್ರೆಸ್ಸೇತರ ಸರಕಾರ ರಚಿಸುವಲ್ಲಿ ಯಶಸ್ವಿಯಾಯಿತು.

By Suddi9

Leave a Reply

Your email address will not be published. Required fields are marked *