ಮಂಗಳೂರು: ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಬಿಜೆಪಿ- ಕಾಂಗ್ರೆಸ್ ಆಗಲಿ ಕೆಲಸ ಮಾಡಿಲ್ಲ. ಬದಲಾಗಿ ಕೋಮು ಹಿಂಸಾಚಾರವನ್ನು ಎರಡು ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಂತಹ ಪ್ರತಿ ಹಿಂದೂ ಕೊಲೆಗಳು ಕಾಂಗ್ರೆಸ್ ಪ್ರೋತ್ಸಾಹದಿಂದ ನಡೆಯುತ್ತಿದೆ ಎಂದು ಆರೋಪಿಸುತ್ತಾರೆ, ಅದಕ್ಕೆ ಪ್ರತಿಯಾಗಿ ಇನ್ನೊಂದೆಡೆ ಗೃಹ ಸಚಿವರು ಹಿಂದುಗಳ ಜತೆಗೆ ಮುಸ್ಲಿಂರ ಕೊಲೆಗಳು ನಡೆದಿದೆ ಎಂದು ಪಟ್ಟಿ ಬಿಡುಗಡೆ ಮಾಡಿ ಒಲೈಕೆ ರಾಜಕಾರಣದಲ್ಲಿ ತೊಡಗುತ್ತಾರೆ ಎಂದು ಟೀಕಿಸಿದರು.
ಇದೇ ವೇಳೆ ಬಿಜೆಪಿಯ ಜನಸುರಕ್ಷಾ ಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಕುಮಾರಸ್ವಾಮಿ , ಜನರನ್ನು ಎದುರಿಸುವ ಸಮರ್ಥ ನಾಯಕರು ಬಿಜೆಪಿಯಲ್ಲಿಲ್ಲ ಹೀಗಾಗಿ ಅವರು ಪದೇ ಪದೇ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಯನ್ನು ರಾಜ್ಯಕ್ಕೆ ಕರೆಸುತ್ತಿದ್ದಾರೆ ಮತೀಯ ಧ್ರುವೀಕರಣದೊಂದಿಗೆ ಮಾತ್ರ ಕರಾವಳಿ ಜಿಲ್ಲೆಗಳಲ್ಲಿ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ಎಂ.ಫಾರೂಕ್, ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.

