ತುಮಕೂರು: ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಸಮೀಪದ ಚಿಕ್ಕಹಳ್ಳಿಯಲ್ಲಿ ನಡೆದಿದೆ.

ಹಿರೇಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ನಾಗರಾಜು ಎಂಬುವವರಿಗೆ ಸೇರಿದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕುಟುಂಬದವರು ಸಮೀಪದ ದೇವರ ಹೊಸಹಳ್ಳಿಯ ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ತೆರಳಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಮನೆಯಲ್ಲಿ ಯಾರೂ ಇಲ್ಲದರಿಂದ ಅವಘಡ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
