
ಉಡುಪಿ: ರೌಡಿ ಶೀಟರ್ ನವೀನ್ ಡಿಸೋಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಉಡುಪಿ ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಕಿಶನ್ ಹೆಗ್ಡೆ, ರಮೇಶ್ ಪೂಜಾರಿ, ಮಹೇಶ್ ಗಾಣಿಗ, ಮೋಹನ್ ಚಂದ್ರ ವಿ ಶೆಟ್ಟಿ ಹಾಗೂ ನಾಗರಾಜ ಪೂಜಾರಿ ಎಂದು ಗುರುತಿಸಲಾಗಿದೆ.
ಏನಿದು ಪ್ರಕರಣ?: ಫೆಬ್ರವರಿ 28 ರಂದು ರೌಡಿ ಶೀಟರ್ ಕಿಶನ್ ಹೆಗ್ಡೆ ತಂಡದಿಂದ ರೌಡಿ ಶೀಟರ್ ನವೀನ್ ಡಿಸೋಜ ಕೊಲೆ ನಡೆದಿದ್ದು, ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೇಧಿಸಿದ ಪೊಲೀಸರು 5ಮಂದಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಕೃತ್ಯ ವೈಮನಸ್ಸಿನಿಂದ ನಡೆದಿದೆ ಎನ್ನಲಾಗಿದ್ದು, ಆರೋಪಿಗಳು ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.
