ಅಝಂಘರ್: ದೇಶದಲ್ಲಿ ಹೋರಾಟಗಾರರ ಪ್ರತಿಮೆಗಳನ್ನು ಧ್ವಂಸಗೊಳಿಸುವ ಸರಣಿ ಕೃತ್ಯ ಮುಂದುವರೆದಿದ್ದು, ಉತ್ತರ ಪ್ರದೇಶದ ಆಝಂಘರ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮೂರ್ತಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಕಪ್ತಾನ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಪತ್ತಿ ಗ್ರಾಮದಲ್ಲಿ ಅಂಬೇಡ್ಕರ್ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಜನ ಪ್ರತಿಭಟನೆಯನ್ನು ನಡೆಸಿದ್ದಾರೆ. ಈಗಾಗಲೇ ಧ್ವಂಸಗೊಂಡ ಅಂಬೇಡ್ಕರ್ ಮೂರ್ತಿಯ ದುರಸ್ಥಿ ಕಾರ್ಯ ನಡೆಯುತ್ತಿದೆ.

ಘಟನೆ ಸಂಬಂಧ ಈಗಾಗಲೇ ಪೊಲೀಸರು ಮೂವರು ಶಂಕಿತರನ್ನು ಗುರುತಿಸಿದ್ದಾರೆ. ಆದರೆ ಅವರೆಲ್ಲರೂ ತಲೆ ಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.

 

By Suddi9

Leave a Reply

Your email address will not be published. Required fields are marked *