ಬೆಂಗಳೂರು: ಇಂದು ಬೆಳಗ್ಗೆ ನನ್ನ ಮೇಲೆ ಹಲ್ಲೆಯಾಗಿದೆ ಅಂತಾ ನಾಗವಲ್ಲಿ ವರ್ಸಸ್ ಆಪ್ತಮಿತ್ರ-2 ಚಿತ್ರದ ನಾಯಕ ಕಾರ್ತಿಕ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಚಿತ್ರದ ಪ್ರಚಾರಕ್ಕಾಗಿ ಈ ರೀತಿಯ ಡ್ರಾಮಾ ಮಾಡಲಾಗಿದೆ ಅಂತ ಹೇಳಲಾಗಿದೆ. ಸುಮಾರು 8 ಜನರ ಗ್ಯಾಂಗ್ ಹಲ್ಲೆ ಮಾಡಿದ್ದು, ಸ್ವಿಫ್ಟ್ ಕಾರು, 50 ಸಾವಿರ ರೂ. ನಗದು ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಿ ಕಾರ್ತಿಕ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳಿರುವುದು ಇರೋದನ್ನು ಗಮನಿಸಿ ಪೊಲೀಸರು ತನಿಖೆ ನಡೆಸಿದ್ದರು. ತನಿಖೆ ವೇಳೆಯಲ್ಲಿ ನಟ ತನ್ನ ನಾಗವಲ್ಲಿ ವರ್ಸಸ್ ಆಪ್ತಮಿತ್ರರು ಚಿತ್ರದ ಪ್ರಚಾರಕ್ಕಾಗಿ ಈ ರೀತಿಯ ಗಿಮಿಕ್ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ.

