ಬೆಂಗಳೂರು : ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ನೀಡಿರುವ ತಜ್ಞರು ವರದಿಯನ್ನು ಅಂಗೀಕರಿಸಬಾರದು ಎಂದು ವೀರಶೈವ ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಸಿಎಂ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಳೆ ಹೊಸೂರು ಮಠದ ದಿಂಗಾಲೇಶ್ವರ ಶ್ರೀ, ಸರ್ಕಾರ ನೇಮಕ ಮಾಡಿದ ತಜ್ಞರ ಸಮಿತಿ ಏಕಪಕ್ಷೀಯವಾಗಿ ವರದಿ ನೀಡಿದೆ. ಹಾಗಾಗಿ ಅ ಸಮಿತಿಯು ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡದಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದರು.
ತಜ್ಞರ ಸಮಿತಿಯನ್ನು ಸರಿಯಾಗಿ ರಚನೆ ಮಾಡಿಲ್ಲ. ಹೀಗಾಗಿ ಸರ್ಕಾರ ಸಮಿತಿಯ ಶಿಫಾರಸನ್ನು ತಿರಸ್ಕಾರ ಮಾಡಬೇಕು. ಅವಶ್ಯಕತೆ ಇದ್ದರೆ ಮತ್ತೊಂದು ಸಮಿತಯನ್ನು ರಚನೆ ಮಾಡಬೇಕು. ಎರಡು ಕಡೆಯ ಮುಖಂಡರನ್ನು ಈ ಸಮಿತಿಯೊಳಗೆ ಸೇರಿಸಿಕೊಂಡು ವರದಿ ಸಿದ್ದಪಡಿಸುವಂತೆ ಸೂಚಿಸಿ ವರದಿ ಪಡೆಯಬೇಕು. ಇಲ್ಲದಿದ್ದರೆ ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.

