ಮಂಗಳೂರು: ನಗರದಲ್ಲಿ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟಿ.ಆರ್ ಸುರೇಶ್ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ಗಳ ಹಾವಳಿ ಹೆಚ್ಚಾಗಿದ್ದು ಈ ವಾರದಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೇ ಪ್ಲಾಸ್ಟಿಕ್ ಫ್ಲೆಕ್ಸ್ ಹಾಕುವುದನ್ನು ನಿರ್ಬಂದಿಸಲಾಗಿದೆ ಎಂದ ಅವರು, ಈ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ಪಾಲಿಕೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.

