ಹೈದರಾಬಾದ್: ತನ್ನಿಬ್ಬರು ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಸಿಕಂದರಾಬಾದ್ನಲ್ಲಿ ನಡೆದಿದೆ.
ಆರು ತಿಂಗಳ ಹೆಣ್ಣು ಮಗು ಹಾಗೂ ಆರು ವರ್ಷದ ಗಂಡು ಮಗುವಿಗೆ ವಿಷ ಉಣಿಸಿ ಕೊಲೆ ಮಾಡಿದ ದಂಪತಿ ನಂತರ ಅವರೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

