ivan-(1)

ಉಡುಪಿ: ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ  ಹೈಕಮಾಂಡ್ ಗೆ ಬೇಡಿಕೆ ಇಟ್ಟಿದ್ದೇನೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ಐವನ್ ಡಿಸೋಜ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿ ಎಂದು ಅರ್ಜಿ ಸಲ್ಲಿಸಿದ್ದು, ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.

ಮಾ. 20ಕ್ಕೆ ಉಡುಪಿಯಲ್ಲಿ ರಾಹುಲ್ ಗಾಂಧಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಎರ್ಮಾಳ್ ಸೇವಾದಳ ಕಚೇರಿಯ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕಾಪು ತಾಲೂಕಿನ ಎರ್ಮಾಳ್ ನಲ್ಲಿ ರಾಹುಲ್ ಗಾಂಧಿ ಊಟ ಮಾಡ್ತಾರೆ. ಪಡುಬಿದ್ರೆಯಲ್ಲಿ ರೋಡ್ ಶೋ ನಡೆಸಲಿದ್ದು,  ಪಡುಬಿದ್ರೆಯಲ್ಲಿ ಕಾರ್ನರ್ ಮೀಟಿಂಗ್ ನಡೆಸಲಿದ್ದಾರೆ. ಬಳಿಕ ಮಂಗಳೂರು ಜ್ಯೋತಿ ಸರ್ಕಲ್ ನಿಂದ ರೋಡ್ ಶೋ ನಡೆದು,  ನೆಹರೂ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

 

By suddi9

Leave a Reply

Your email address will not be published. Required fields are marked *