ಕುಂದಾಪುರ : ಪತಿ-ಪತ್ನಿ ನಡುವೆ ಹಣಕಾಸಿನ ವಿಚಾರದಲ್ಲಿ ಜಗಳ ನಡೆದಿದ್ದು, ಇದೇ ವಿಚಾರದಲ್ಲಿ ಪತಿ ತನ್ನ ಪತ್ನಿಯ ಕತ್ತನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಅಮಾಸೆಬೈಲ್ ಠಾಣಾ ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು ಎಂಬಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ತೊಂಬಟ್ಟುವಿನ ಆಶಾ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಪತಿ ಉದಯ ಪೂಜಾರಿ(40) ಎಂಬಾತನನ್ನು ಬಂಧಿಸಿದ್ದಾರೆ.
ಮದ್ಯ ಸೇವನೆಯ ಚಟ ಹೊಂದಿದ್ದ ಉದಯ ಪೂಜಾರಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಪತ್ನಿ ಆಶಾ ಜೊತೆ ಜಗಳ ನಡೆಸಿದ್ದು, ಬಳಿಕ ಆಕೆಯನ್ನು ಕೊಲೆ ಕತ್ತಿಯಿಂದ ಕುತ್ತಿಗೆ ಕಡಿದು ತೀವ್ರ ಗಾಯಗೊಳಿಸಿದ್ದಾನೆ.
ಈ ಸಂಬಂಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

