180318_alvas

ಮೂಡುಬಿದಿರೆ: ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕಾಲೇಜು ವಾರ್ಡನ್ ಗಳು ಯದ್ವಾತದ್ವಾ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಆಳ್ವಾಸ್ ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಕಾಲೇಜಿನ ವಾರ್ಡನ್ ಗಳ ಈ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ಆರಂಭಿಸಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿದ ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದರು.

ಆದರೆ, ಈ ಸಂಭ್ರಮಾಚರಣೆಗೆ ಕಾಲೇಜಿನ ವಾರ್ಡನ್ ಮತ್ತು ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ. ಕೆಲ ವಿದ್ಯಾರ್ಥಿಗಳು ಹೇಳುವ ಪ್ರಕಾರ, ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ಸಿಬ್ಬಂದಿಯನ್ನು ಪ್ರಶ್ನೆ ಮಾಡಿದ್ದಾರೆ. ಇದನ್ನು ನೆಪವಾಗಿ ಇಟ್ಟುಕೊಂಡು ವಾರ್ಡನ್ ಮತ್ತು ಇತರೇ ಕಾಲೇಜು ಸಿಬ್ಬಂದಿ ಸೇರಿ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. 20ಕ್ಕಿಂತಲು ಹೆಚ್ಚು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಕಾಲೇಜು ಸಿಬ್ಬಂದಿಗಳು ಸೇರಿ ಥಳಿಸುವ ವೀಡಿಯೋವನ್ನು ವಿದ್ಯಾರ್ಥಿಗಳು ಸ್ವತಃ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಗಳಿಗೆ ನೀಡಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.

180318_alvas (3)

 

By Suddi9

Leave a Reply

Your email address will not be published. Required fields are marked *