natarajanmaruthappa-1521507557

ಚೆನ್ನೈ: ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ ಕೆ ಶಶಿಕಲಾ ಅವರ ಪತಿ ಎಂ.ನಟರಾಜನ್ ಮಾರುತಪ್ಪ(75) ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಗ್ಲೆನಿಗ್ಲಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು(ಮಾ.20) ಬೆಳಗ್ಗಿನ ಜಾವ ಸುಮಾರು 1:35 ಕ್ಕೆ ಅವರು ಕೊನೆಯುಸಿರೆಳೆದರು. ಕಳೆದ ವರ್ಷವಷ್ಟೇ ಕಿಡ್ನಿ ಮತ್ತು ಲಿವರ್ ಜೋಡಣೆ ಚಿಕಿತ್ಸೆಗೊಳಗಾಗಿದ್ದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಅಕ್ರಮ ಆಸ್ತಿ ಪ್ರಕರಣದಲ್ಲಿ ದೋಷಿಯಾಗಿರುವ ಅವರ ಪತ್ನಿ ಶಶಿಕಲಾ ನಟರಾಜನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾರಾಗ್ರಹ ಶಿಕ್ಷೆ ಅನುಭವಿಸುತ್ತಿದ್ದಾರೆ.

 

 

 

 

 

 

By suddi9

Leave a Reply

Your email address will not be published. Required fields are marked *