ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಜನಾಶೀರ್ವಾದ ಸಮಾವೇಶದಲ್ಲಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಕರಾವಳಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಂಗಿದ್ದ ರಾಹುಲ್ ಗಾಂಧಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಜತೆ ಸಭೆ ನಡಸಿ ಚುನಾವಣೆ ರಣತಂತ್ರದ ಬಗ್ಗೆ ಚರ್ಚಿಸಿದರು.
ಸಭೆ ಮುಗಿದ ಬಳಿಕ ಸಚಿವ ಪ್ರಮೋದ್ ಮಧ್ವರಾಜ್ ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ನಾಯಕರ ಪ್ರತ್ಯೇಕ ಸಭೆ ನಡೆಸಿದ್ದು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಿಗೆ ಅಭಯ ನೀಡಿದ್ದಾರೆ. ಪಕ್ಷಕ್ಕಾಗಿ ಯಾರು ತ್ಯಾಗ ಮಾಡುತ್ತಾರೋ ಅವರಿಗೆ ಟಿಕೆಟ್ ನೀಡುವುದಾಗಿ ರಾಹುಲ್ ಸ್ಪಷ್ಟ ಪಡಿಸಿದ್ದಾರೆ. ಟಿಕೆಟ್ ವಂಚಿತರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದ ಅವರು, ಸಭೆಯಲ್ಲಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಟಿಕೆಟ್ ತೀರ್ಮಾನ ಆಗಿಲ್ಲ ಎಂದು ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದರು.
ಸಭೆಯಲ್ಲಿ ದ.ಕ,ಉಡುಪಿ ಜಿಲ್ಲೆಯ ಒಟ್ಟು 13 ವಿಧಾನ ಸಭಾ ಕ್ಷೇತ್ತ್ರದ 26 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ, ರಾಜ್ಯ ಕಾಂಗ್ರೆಸ್ ಉಸ್ಥುವಾರಿ ಕೆ.ಸಿ.ವೇಣುಗೋಪಾಲ ಸೇರಿದಂತೆ ಇತರರು ಇದ್ದರು.

