ಮಂಗಳೂರು: ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃ ಮಂಡಳಿ, ದುರ್ಗಾವಾಹಿನಿ ಹಾಗೂ ಶ್ರೀ ರಾಮೋತ್ಸವ ಸಮಿತಿ ಇದರ ಸಂಯುಕ್ತಾಶ್ರಯದಲ್ಲಿ ೧೭ನೇ ವರ್ಷದ “ರಾಮೋತ್ಸವ”ಕಾರ್ಯಕ್ರಮ ಮಾ. 24 ರಿಂದ 26 ರವರೆಗೆ ನಗರದ ಕೇಂದ್ರ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸುಕೃತ್ ಕೊಟ್ಟಾರಿ ತಿಳಿಸಿದ್ದಾರೆ.
ನಗರದ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಅಂದಿನಿಂದ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಶಿವಾನಂದ್ ಮೆಂಡೋನ್, ಪ್ರವೀಣ್, ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

