Basketball arena 3d

ಕೋಲಾರ: ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಮಾರ್ಗದ ಬಳಿ ಸಂಚರಿಸುತ್ತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಗರದ ವಡಗೂರು ಕ್ರಾಸ್ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಸಂಭವಿಸಿದೆ.

ಮೃತ ಮಕ್ಕಳನ್ನು ಕೆಂಬೋಡಿ ಗ್ರಾಮದ ಜನತಾ ಶಾಲೆಯ ವಿದ್ಯಾರ್ಥಿಗಳೆಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಗೆ ಢಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಮಕ್ಕಳ ಮೇಲೆ ಹರಿದು ಹೋದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By Suddi9

Leave a Reply

Your email address will not be published. Required fields are marked *