ಬಂಟ್ವಾಳ: ಕಾವಳಮೂಡೂರು ಗ್ರಾಮದ ಕೆದ್ದಳಿಕೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ರಮೇಶ್ ನಾಯಕ್ ರಾಯಿ ಅವರು ರಾಷ್ಟ್ರೀಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರ ೆ.ಈ ಬಗ್ಗೆ ಅವರು ಇಲಾಖೆಯ ವತಿಯಿಂದ ಬಂದಿರುವ ಸಂದೇಶವನ್ನು ಖಚಿತ ಪಡಿಸಿದ್ದು , ಅಧಿಕೃತ ಪತ್ರ ಇನ್ನಷ್ಟೇ ತಲುಪಬೇಕಾಗಿದೆಯೆಂದು ಅವರು ತಿಳಿಸಿದ್ದಾರೆ.

2012-13ರ ಶೈಕ್ಷಣಿಕ ಸಾಲಿನಲ್ಲಿ ಕನರ್ಾಟಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದ ಇವರು 2014-15ನೇ ಸಾಲಿನ ರಾಷ್ಟ್ರೀಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 15 ವರ್ಷಗಳಿಂದ ಕೆದ್ದಳಿಕೆ ಸರಕಾರಿ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಈ ಶಾಲೆಯನ್ನು ಖಾಸಗಿ ಶಾಲೆಗಳಿಗಿಂತಲೂ ಅಭಿವೃದ್ಧಿಗೊಳಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಮಾದರಿ ಶಾಲೆಯೆಂದು ಗುರುತಿಸಲು ಕಾರಣಕರ್ತರಾಗಿದ್ದಾರೆ. 2003ರಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, 2004ರಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ,ಸಹಕಾರಿ ,ಧಾಮರ್ಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.
`ಪ್ರಸ್ತುತ ಸಾಲಿನ ರಾಷ್ಟ್ರೀಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸಂದಿರುವುದು ಸಂತಸವನ್ನು ತಂದಿದೆ. ಇದು ತಾನು ಕರ್ತವ್ಯ ನಿರ್ವಹಿಸುತ್ತಿರುವ ಶಾಲೆ, ಶಿಕ್ಷಕ ಸಮುದಾಯ ಇಲಾಖೆಯ ಅಧಿಕಾರಿಗಳು, ತಾಲೂಕಿನ ಜನರ ಹಾಗೂ ಜನಪ್ರತಿನಿಧಿಗಳ ಸಹಕಾರಕ್ಕೆ ಸಂದ ಗೌರವವಾಗಿದೆ ಎಂದು ರಮೇಶ್ ನಾಯಕ್ ಸುದ್ದಿ9ನೊಂದಿಗೆ ತನ್ನ ಖುಷಿಯನ್ನು ಹಂಚಿಕೊಂಡಿದ್ದಾರೆ.
